ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಂಸತ್ತಿನಲ್ಲಿ ಅಂಬೇಡ್ಕರ್ ನೀಡಿರುವ ಹೇಳಿಕೆ ಸರಿಯಲ್ಲ. ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ದಲಿತ ನಾಯಕ ಬಿಆರ್ ಅಂಬೇಡ್ಕರ್ ಅವರನ್ನು ಸಚಿವ ಅಮಿತ್ ಶಾ ಅವಮಾನಿಸಿದ್ದಾರೆ. ಇದು ತಪ್ಪು ಎಂದು ಅಮಿತ್ ಶಾಗೆ ಹೇಳುವ ಬದಲು ಪ್ರಧಾನಿ ಮೋದಿ ಅವರು ಅಂಬೇಡ್ಕರ್ ಅವರ ಹೇಳಿಕೆಯ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ನಮ್ಮ ಬೇಡಿಕೆ ಏನೆಂದರೆ ಅಮಿತ್ ಶಾ ಕ್ಷಮೆ ಯಾಚಿಸಬೇಕು ಮತ್ತು ಪ್ರಧಾನಿ ಮೋದಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ನಂಬಿಕೆ ಇದ್ದರೆ ಮಧ್ಯರಾತ್ರಿಯೊಳಗೆ ಅಮಿತ್ ಶಾ ಅವರನ್ನು ವಜಾ ಮಾಡಬೇಕು. ಅವರಿಗೆ ಸಂಪುಟದಲ್ಲಿ ಉಳಿಯುವ ಹಕ್ಕಿಲ್ಲ, ಅವರನ್ನು ವಜಾ ಮಾಡಬೇಕು. ಆಗ ಮಾತ್ರ ಜನರು ಮೌನವಾಗಿರುತ್ತಾರೆ, ಇಲ್ಲದಿದ್ದರೆ ಜನರು ಪ್ರತಿಭಟಿಸುತ್ತಾರೆ. ಡಾ ಬಿಆರ್ ಅಂಬೇಡ್ಕರ್ ಅವರಿಗಾಗಿ ಜನರು ಪ್ರಾಣ ತ್ಯಾಗ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.