ಪ್ರತಿಕೂಲ ಹವಾಮಾನದಲ್ಲೂ ಸೇರಿದ ಜನಸ್ತೋಮಕ್ಕೆ ಕೃತಜ್ಞತೆ ಸಲ್ಲಿಸಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೃಹತ್‌ ರೋಡ್‌ ಶೋ ಕಾರ್ಯಕ್ರಮವು ಭಾರಿ ಮಳೆಯ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.

ಇದಕ್ಕೆ ರೀ ಟ್ವೀಟ್ ಮಾಡಿರುವ ಅಮಿತ್ ಶಾ, ಭಾರೀ ಮಳೆಯಿಂದಾಗಿ ದೇವನಹಳ್ಳಿ ಜನತೆಯೊಂದಿಗಿರಲು ಸಾಧ್ಯವಾಗಿಲ್ಲ. ಪ್ರತಿಕೂಲ ಹವಾಮಾನದ ಸಂದರ್ಭದಲ್ಲೂ ಭಾರಿ ಸಂಖ್ಯೆಯಲ್ಲಿ ಸೇರಿದ ಜನಸ್ತೋಮಕ್ಕೆ ಕೃತಜ್ಞನಾಗಿದ್ದೇನೆ. ಪ್ರಚಾರಕ್ಕಾಗಿ ದೇವನಹಳ್ಳಿಗೆ ಶೀಘ್ರದಲ್ಲೇ ಭೇಟಿ ನೀಡುತ್ತೇನೆ. ಕರ್ನಾಟಕದ ಜನರ ಉತ್ಸಾಹವು ಬಿಜೆಪಿಯು ಬೃಹತ್‌ ಗೆಲುವು ಸಾಧಿಸಲಿದೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ, ಸ್ಥಳಕ್ಕೆ ತೆರಳುವ ಮೊದಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆದರೆ ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿತ್ತು.

ಆದ್ರೆ ಇತ್ತ ಅಮಿತ್ ಶಾ ಅವರ ಭೇಟಿಗೆ ಮುಂಚಿತವಾಗಿ ದೇವನಹಳ್ಳಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕೇಸರಿ ಬಣ್ಣದಿಂದ ಕಂಗೊಳಿಸುತ್ತಿತ್ತು. ರಸ್ತೆಯ ಇಕ್ಕೆಲುಗಳಲ್ಲಿ ಬ್ಯಾರಿಕೇಡ್ ಹಾಕಿ ಕೇಸರಿ ಬಾವುಟಗಳ ಕಟ್ಟಲಾಗಿತ್ತು. ಸಾವಿರಾರು ಜನ ಕಾಯುತಿದ್ದರು. ಆದರೆ ಕೊನೇ ಕ್ಷಣದಲ್ಲಿ ರೋಡ್ ಭಾರೀ ಮಳೆ ಸುರಿಯಿತು. ಇದರಿಂದಾಗಿ ರೋಡ್ ಶೋ ರದ್ದಾಗಿದ್ದರಿಂದ ಕಾರ್ಯಕರ್ತರಿಗೆ ನಿರಾಸೆಯಾಯಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!