ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಂಸದರ ನಿಧಿಯಲ್ಲಿ ಶೇ 70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಯ್ ಬರೇಲಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಗಾಂಧಿ ಕುಟುಂಬವು ಸುಳ್ಳು ಹೇಳುವುದರಲ್ಲಿ ನಿಪುಣರು. ಈ ಕ್ಷೇತ್ರದಿಂದ ಕುಟುಂಬಕ್ಕೆ ಹಲವು ವರ್ಷಗಳಿಂದ ಅವಕಾಶ ನೀಡಿದ್ದೀರಿ. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಕಾಂಗ್ರೆಸ್ಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ ಅವರು, ರಾಯ್ ಬರೇಲಿಯನ್ನು ಮೋದಿ ಅವರ ಅಭಿವೃದ್ಧಿ ಪಯಣದಲ್ಲಿ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.
Jati jati anta tandittu desha na halmadoke hortiddare