ಏ.21,22ರಂದು ರಾಜ್ಯಕ್ಕೆ ಅಮಿತ್‌ ಶಾ: ರೋಡ್‌ ಶೋ ಸೇರಿದಂತೆ ಹಲವು ಸಭೆಗಳಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ಅಂತ್ಯವಾಗುವ ಬೆನ್ನಲ್ಲೇ ಪ್ರಚಾರದ ಕಾವು ಶುರುವಾಗಿದೆ. ಇದರ ಭಾಗವಾಗಿ ಏಪ್ರಿಲ್ 21 ಮತ್ತು 22 ರಂದು ದಾವಣಗೆರೆ ಮತ್ತು ದೇವನಹಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ಈಗಾಗಲೇ ಚುನಾವಣೆ ಅಖಾಡಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಎಂಟ್ರಿ ಕೊಟ್ಟಿದ್ದು, ಇದರ ಬೆನ್ನಲ್ಲೇ ಶಾ ಹಾಗೂ ಮೋದಿ ಜೋಡಿ ಕಮಾಲ್ ಮಾಡಲು ಸಿದ್ಧರಾಗಿದ್ದಾರೆ.

ಏಪ್ರಿಲ್ 21-22ರಂದು ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಮತ್ತು ಕೆಲವು ಪ್ರಮುಖ ಮಠಾಧೀಶರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಅಮಿತ್ ಶಾ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದು, ಪ್ರಚಾರದ ಕಾರ್ಯತಂತ್ರ ರೂಪಿಸಲಿದ್ದಾರೆ.

ಅಮಿತ್ ಶಾ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಖಾಡಕ್ಕೆ ಇಳಿಯಲಿದ್ದು ಏಪ್ರಿಲ್ 25ರ ಬಳಿಕ ಸುಮಾರು 15-20 ರೋಡ್ ಶೋ, ಸಮಾವೇಶ, ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!