ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಚುನಾವಣಾ ಚಾಣಕ್ಯ ಅಮಿತ್ ಶಾ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ಉಪಹಾರ ಅಥವಾ ರಾತ್ರಿ ಭೋಜನಕ್ಕೆ ಎಚ್.ಡಿ. ಕುಮಾರಸ್ವಾಮಿ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಇಲ್ಲಿ ರಾಜಕೀಯದ ಬಗ್ಗೆ ಚರ್ಚೆ ನಡೆಯಲಿದೆ.
ಇತ್ತೀಚೆಗಷ್ಟೇ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟದ ನೇತೃತ್ವ ವಹಿಸುವಂತೆ ಎಚ್‌ಡಿಕೆಗೆ ಅಮಿತ್ ಶಾ ಹೇಳಿದ್ದರು ಎನ್ನಲಾಗಿದೆ. ಈ ವೇಳೆ ಎಚ್‌ಡಿಕೆ ಅಮಿತ್ ಶಾ ಅವರನ್ನು ಮನೆಗೆ ಆಹ್ವಾನಿಸಿದ್ದರು.
ಆಹ್ವಾನ ಸ್ವೀಕರಿಸಿರುವ ಅಮಿತ್ ಶಾ ನಾಳೆ ಎಚ್‌ಡಿಕೆ ಮನೆಗೆ ಭೇಟಿ ನೀಡುವ ಸಾಧ್ಯತೆ ಇದೆ.