ರಾಜ್ಯದಲ್ಲಿ ಅಮಿತ್‌ ಶಾ ಪ್ರವಾಸ : ಇಂದಿನ ಕಾರ್ಯಕ್ರಮದ ವಿವರ ಇಲ್ಲಿದೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಚಾಣಕ್ಯ ಅಮಿತ್ ಶಾ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಶಾ ಇಂದು ಬೀದರ್, ರಾಯಚೂರು, ಬೆಂಗಳೂರಿನಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅವರ ಪ್ರವಾಸದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

ಮೊದಲಿಗೆ ಬೀದರ್ ಜಿಲ್ಲೆಯ ಗೊರಟಾ ಮೈದಾನದಲ್ಲಿ 103 ಅಡಿ ಎತ್ತರದ ರಾಷ್ಟ್ರಧ್ವಜ ಮತ್ತು ‘ಗೋರಾಟ ಶಹೀದ್ ಸ್ಮಾರಕ’ ಮತ್ತು ಸರ್ದಾರ್ ವಲ್ಲಭಭಾಯ್ ಪಟೇಲ್ ರ 11 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಲಿದ್ದಾರೆ.

ನಂತರ ರಾಯಚೂರು ಜಿಲ್ಲೆಯ ಗಬ್ಬೂರಿನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಶಾ ಭಾಗಿಯಾಗಲಿದ್ದಾರೆ. ಸಂಜೆ ‘ಅನಿವಾಸಿ ಗುಜರಾತಿ ಸಮಾಜ’ ಆಯೋಜಿಸಿರುವ ಕಾರ್ಯಕ್ರಮದಲ್ಲೂ ಶಾ ಪಾಲ್ಗೊಳ್ಳಲಿದ್ದಾರೆ.

ಸಂಜೆ 6.30ಕ್ಕೆ ವಿಧಾನಸೌಧದ ಮುಂದೆ ಬಸವೇಶ್ವರ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ನಂತರ ಬೆಂಗಳೂರು ಹಬ್ಬ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 8.30ಕ್ಕೆ ಖಾಸಗಿ ಹೋಟೆಲ್​ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಇಂದು ರಾತ್ರಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅಮಿತ್ ಶಾ ವಾಸ್ತವ್ಯ ಹೂಡಿ ನಾಳೆ ಬೆಳಗ್ಗೆ 9 ಗಂಟೆಗೆ ದೆಹಲಿಗೆ ತೆರಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!