ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಅಮಿತ್ ಶಾ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಆಗಮನಕ್ಕೆ ಭರ್ಜರಿ ತಯಾರಿ ನಡೆದಿದೆ. ಕರಾವಳಿಗೆ ಶಾ ಭೇಟಿ ಹಿನ್ನೆಲೆ ಪುತ್ತೂರು ವಲಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಅಮಿತ್ ಶಾ ಅವರು ಆಗಮಿಸುತ್ತಿದ್ದಾರೆ. ಈ ಕಾರಣದಿಂದ ನಿನ್ನೆ ಮಧ್ಯರಾತ್ರಿ 12 ಗಂಟೆಯಿಂದ ಇಂದು ರಾತ್ರಿ 8 ವರೆಗೆ ಮದ್ಯ ಮಾರಾಟ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ ಆದೇಶ ಹೊರಡಿಸಿದ್ದರು.