Friday, June 2, 2023

Latest Posts

ಶಾಸಕ ರಾಮದಾಸ್‌ ಕಂಡು ಖುಷಿಯಿಂದ ಅಪ್ಪಿ ಬೆನ್ನು ತಟ್ಟಿದ ಅಮಿತ್‌ ಶಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಚುನಾವಣೆ ಪ್ರಚಾರ ಎಲ್ಲಡೆ ಭರ್ಜರಿ ನಡೆಯುತ್ತಿದ್ದು, ಅಖಾಡಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಳಿದಿದ್ದಾರೆ. ಇಂದು ಮೈಸೂರಿಗೆ (Mysuru) ಆಗಮಿಸಿದ್ದಾದ ಅವರು , ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಪ್ರಚಾರ ಹಿನ್ನೆಲೆ ಮೈಸೂರು ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಅವರ ಕಾಲಿಗೆ ನಮಸ್ಕರಿಸಿದ
ಕೃಷ್ಣರಾಜೇಂದ್ರ ಕ್ಷೇತ್ರದ ಟಿಕೆಟ್ ವಂಚಿತರಾಗಿರುವ ರಾಮದಾಸ್ ಅವರನ್ನು ಅಮಿತ್ ಶಾ ಬಾಚಿ ತಬ್ಬಿ, ಬೆನ್ನು ತಟ್ಟಿದ್ದಾರೆ.
ಈ ಹಿಂದೆ ಪ್ರಧಾನಿ ಮೈಸೂರಿಗೆ ಭೇಟಿ ನೀಡಿದ್ದಾಗ, ಕೆ.ಆರ್‌. ಕ್ಷೇತ್ರದ ಶಾಸಕ ಎಸ್‌.ಎ. ರಾಮದಾಸ್‌ಗೆ ಗುದ್ದು ನೀಡಿದ್ದರು.

ಈ ಬಗ್ಗೆ ಖುಷಿಯನ್ನು ಹಂಚಿಕೊಂಡ ರಾಮದಾಸ್, ನಾನು ಆರೋಗ್ಯದ ಸಮಸ್ಯೆಯ ಹಿನ್ನೆಲೆ ಆಸ್ಪತ್ರೆಯಲ್ಲಿದ್ದೆ. ರಾಷ್ಟ್ರೀಯ ನಾಯಕರು ಬಂದಾಗ ನಾನು ಸ್ವಾಗತ ಕೋರುವುದು ನನ್ನ ಜವಾಬ್ದಾರಿ. ಏರ್‌ಪೋರ್ಟ್‌ನಲ್ಲಿ ಇಳಿದಾಗ ಅಮಿತ್ ಶಾ ಅವರು ಬಹಳ ಆತ್ಮೀಯವಾಗಿ ಅಪ್ಪುಗೆ ನೀಡಿ ಮಾತನಾಡಿಸಿದರು. ರಾಮದಾಸ್ ಜಿ ಬಹುತ್ ಅಚ್ಚಾ ನಿರ್ಲಿಯಾ ಅಂತಾ ತಬ್ಬಿ ನಗು ಸೂಸಿದರು. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಮದಾಸ್ ಸಂತಸ ವ್ಯಕ್ತಪಡಿಸಿದರು.

ನಾನು ಯಾವತ್ತೂ ಭರವಸೆ ಬೇಕು ಎಂದು ಕೇಳಿದವನಲ್ಲ. ಇದು ಇವತ್ತಿನ ಸಂಬಂಧ ಅಲ್ಲ. 25 ವರ್ಷ ಹಳೆಯ ಸಂಬಂಧ. ಅದನ್ನು ಮಾತಿನಲ್ಲಿ ಹೇಳುವ ಅವಶ್ಯಕತೆ ಇಲ್ಲ. ಅವರು ನನ್ನ ನಿರ್ಣಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನಗೆ ಅಷ್ಟೇ ಸಾಕು. ನಾನು ಕೂಡ ಇಷ್ಟು ಆತ್ಮೀಯತೆಯನ್ನು ನಿರೀಕ್ಷೆ ಮಾಡಿರಲಿಲ್ಲ. ಮೋದಿಯವರು ಬೆನ್ನು ತಟ್ಟಿದಾಗಲೂ ನಾನು ನಿರೀಕ್ಷೆ ಮಾಡಿರಲಿಲ್ಲ. ಮೋದಿಯವರು ಆತ್ಮೀಯವಾಗಿ ಮಾತನಾಡಿಸಿದಾಗಲೂ ಕೂಡ ನಮ್ಮ 25 ವರ್ಷದ ಸಂಬಂಧವನ್ನು ಎಲ್ಲೂ ಹೊರಗೆ ಬಾರದಂತೆ ನೋಡಿಕೊಂಡಿದ್ದೆ. ಇಂದು ನನ್ನ ನಿರ್ಧಾರಕ್ಕೆ ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!