ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ ಎಂದಾಗ ಮಾನ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಮ್ಮ ರಾಜ್ಯಕ್ಕೆ ಬಂದೇ ಬರುತ್ತಾರೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮಯ ಬಂತು ಅಂದರೆ ಸಾಮಾನ್ಯವಾಗಿ ಅಮಿತ್ ಶಾ ಅವರು ನಮ್ಮ ರಾಜ್ಯಕ್ಕೆ ಬಂದೇ ಬರುತ್ತಾರೆ. ಅಷ್ಟೇ ಅಲ್ಲ ಪ್ರಧಾನಿಯವರ ಟಿಪಿ ಇನ್ನೇನು ಇಷ್ಟರಲ್ಲೇ ಬರುತ್ತೆ. ಅವರ ಕಡೆಯಿಂದ ಅವರು ಏನು ಬೇಕೋ ಮಾಡಲಿ, ನಾವು ಏನು ಮಾಡಬೇಕು ಅದನ್ನ ಮಾಡುತ್ತೇವೆ.
ಸಮಯ ಬರಲಿ ಅಭ್ಯರ್ಥಿಗಳ ಟಿಕೆಟ್ ಘೋಷಣೆ ಮಾಡುತ್ತೇವೆ ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.