ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಶ್ರೀರಂಗಪಟ್ಟಣದ ಶಾಸಕ ರಮೇಶ್ ಬಂಡಿಸಿದ್ದೇಗೌಡ ನಾಲಿಗೆ ಹರಿಬಿಟ್ಟಿದ್ದಾರೆ.
ನಮ್ಮ ದೇಶದಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ 370 ಆರ್ಟಿಕಲ್ ವಿಧಿಯ ಸ್ಥಾನಮಾನವನ್ನು ರದ್ದುಗೊಳಿಸಿದ್ದರಿಂದಲೇ ಪಾಕ್ ಉಗ್ರರು ಬಂದು ಕಾಶ್ಮೀರಕ್ಕೆ ಹೋಗಿದ್ದ ಹಿಂದು ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಿದ್ದರು.
ಜೊತೆಗೆ ಆರ್ಟಿಕಲ್ 370 ತೆಗೆಯುವ ಮುನ್ನ ಚೆನ್ನಾಗಿ ಯೋಚಿಸಬೇಕಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅತಿಯಾದ ಆತ್ಮವಿಶ್ವಾಸ ಹಾಗೂ ದುಡುಕಿನ ನಿರ್ಧಾರದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಿದ್ದರು.
ಇದರ ಬಗ್ಗೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲಿಯೇ ಶಾಸಕ ರಮೇಶ್ ಬಂಡಿಸಿದ್ದೇಗೌಡ ಕ್ಷಮೆ ಕೋರಿದ್ದಾರೆ.