Saturday, March 25, 2023

Latest Posts

ಇಂದು ಅಮಿತ್ ಶಾ ರಾಜ್ಯ ಪ್ರವಾಸ, ‘ವಿಜಯ ಸಂಕಲ್ಪ ರಥ ಯಾತ್ರೆ’ಗೆ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ, ಚುನಾವಣಾ ಕಣ ರಂಗೇರಿದೆ.
ಇಂದು ಮತ್ತು ನಾಳೆ ಕೇಂದ್ರ ಗೃಹ ಸಚಿವ ಬೆಂಗಳೂರು, ಬೀದರ್ ಪ್ರವಾಸ ಮಾಡಲಿದ್ದಾರೆ.

ಇಂದು ಬೀದರ್‌ನ ಬಸವಕಲ್ಯಾಣದಿಂದ ಆರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರೆಗೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಈಗಾಗಲೇ ಬೀದರ್‌ಗೆ ಅಮಿತ್ ಶಾ ಬಂದಿಳಿದಿದ್ದು, ಬೆಳಗ್ಗೆ 11:30ಕ್ಕೆ ಗುರುನಾನಕ್ ಝೀರಾಕ್ಕೆ ಭೇಟಿ ನೀಡಲಿದ್ದಾರೆ. ತದನಂತರ ಬಸವಕಲ್ಯಾಣದ ಕ್ರಿಕೆಟ್ ಸ್ಟೇಡಿಯಂಗೆ ತೆರಳಿ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು ದೇವನಹಳ್ಳಿಯಿಂದಲೂ ವಿಜಯ ಸಂಕಲ್ಪ ರಥ ಯಾತ್ರೆ ಆಂಭವಾಗಲಿದ್ದು, ಅದಕ್ಕೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ಜತೆಗೆ ಮೂವತ್ತು ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇರುವ ಸಮಾವೇಶದಲ್ಲಿ ಅಮಿತ್ ಶಾ ಮಾತನಾಡಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸೌದಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!