ಅಮಿತ್ ಶಾ‌ ಹೇಳಿಕೆ ಶೋಭೆ ತರುವಂತದಲ್ಲ: ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ವರದಿ, ಹುಬ್ಬಳ್ಳಿ:

ಚುನಾವಣೆ‌ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ‌ ಅವರು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದು, ಅವರ ಸ್ಥಾನಕ್ಕೆ‌ ಶೋಭೆ ತರುವಂತದಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಚುನಾವಣಾ ಪ್ರಚಾರದ ಸಮಯದಲ್ಲಿ ಸಮಯದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದಂಗೆಗಳಾಗುತ್ತವೆ ಎಂದು ಹೇಳಿದ್ದಾರೆ. ಅಂದರೆ ಕರ್ನಾಟಕದ ಜನರು ಅಷ್ಟು ಕೆಟ್ಟವರಾ? ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಮಾಡಲ್ವಾ? ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಾ ನಡೆಸಿಲ್ವಾ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಪ್ರಧಾನಿ‌ ಮೋದಿ ಸೇರಿ ಕೇಂದ್ರ ಹಲವು ನಾಯಕರು ಲೋಕಸಭೆ ಚುನಾವಣೆಯಂತೆ ವಿಧಾನಸಭೆ ಚುನಾವಣೆಯಲ್ಲಿ‌ ಅಬ್ಬರದ ಪ್ರಚಾರ ತೊಡಗಿದ್ದಾರೆ. ಇದನ್ನು ನೋಡಿದರೆ ಬಹುಶಃ ಅವರು ಹತಾಶೆಯರಾಗಿದ್ದಾರೆ ಅನಿಸುತ್ತಿದೆ ಎಂದರು.

ಬಿಜೆಪಿ ಆಡಳಿತ ಬೇಸತ್ತಿರುವ ರಾಜ್ಯದ ಜನ ಅವರನ್ನು ಸೋಲಿಸಲು ಪಣತೊಟ್ಟಿದ್ದಾರೆ. ಕಾಂಗ್ರೆಸ್ ಪರವಾಗಿ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರ ಬದಲಾವಣೆಗೆ ಜನ ಇಚ್ಛಿಸಿದ್ದಾರೆ. ನಾಲ್ಕು ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದು, ಕಾಂಗ್ರೆಸ್ ಪರ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಭ್ರಷ್ಟಾಚಾರ ಮಾಡಲಾಗಿದೆ ಎಂದು ಗುತ್ತಿಗೆದಾರರು ಪತ್ರ ಬರೆದರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ವಿರೋಧ ಪಕ್ಷದವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಹೇಳಿದರೆ ಸಾಕು ಜಾರಿ‌ ನಿರ್ದೇಶನಾಲಯ ಸೇರಿದಂತೆ ಅನೇಕ ತನಿಖಾ ಸಂಸ್ಥೆ ಬಳಸಿಕೊಂಡು ಹೆದರಿಸುವ ಕೆಲಸ ಮಾಡುತ್ತಾರೆ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯ ಎಂದು ಹರಿಹಾಯ್ದರು. ‌

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವಾಗಿಲ್ಲ.‌ ನಿರುದ್ಯೋಗ, ಭ್ರಷ್ಟಾಚಾರ ಹೆಚ್ಚಾಗಿದೆ. ಬೆಲೆ ಏರಿಕೆಯಿಂದ ಜನರು ಕಷ್ಟು ಪಡುತ್ತಿದ್ದಾರೆ. ಇದೆಲ್ಲವನ್ನೂ ಸರಿಪಡಿಸಲು ರಾಜ್ಯದ ಕಾಂಗ್ರೆಸ್ ಅಧಿಕಾರಕ್ಕೆ‌ ತರುವ ಗುರಿ ಇದೆ ಎಂದರು.

ಪ್ರಧಾನಿ ಮೋದಿ ಅವರು ನನ್ನ ಮುಖ ನೋಡಿ ಮತ ಹಾಕಿ ಎನ್ನುತ್ತಿದ್ದಾರೆ. ನಿಮ್ಮ ಮುಖ ನೋಡಿ ಇನ್ನೂ ಯಾವ ಯಾವ ಚುನಾವಣೆಯಲ್ಲಿ ಮತ ಹಾಕಬೇಕು ಎಂದು ಪ್ರಶ್ನಿಸಿದ ಅವರು, ಕರ್ನಾಟಕ ಸಿಎಂ ಆಗುತ್ತಿರಾ ಎಂದರು.

ಸಿಎಂ ಅವರು ಪ್ರಧಾನಿ ಮೋದಿ ಹಾಗೂ ಅಮಿತ್ ಅವರನ್ನು ನೋಡಿ ಮತ ಹಾಕಿ ಎಂದು ಹೇಳುತ್ತಿದ್ದಾರೆ. ಅಂದರೆ ಸಿಎಂ‌ ಆಗಿ ನೀವು ಏನು ಅಭಿವೃದ್ಧಿ ಮಾಡಿಲ್ಲ ಎಂಬ ಅರ್ಥವಾಗುತ್ತಿದೆ. ಮೊದಲು ರಾಜ್ಯವನ್ನು ಅಭಿವೃದ್ಧಿ ಮಾಡಿ, ಯುವಕರಿಗೆ ಉದ್ಯೋಗ ನೀಡಿ ಬಳಿಕ ಮತ ಕೇಳಿ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!