SHOCKING | ಅಮಿತಾಬ್, ಅಂಬಾನಿ, ಧರ್ಮೇಂದ್ರ ಮನೆಯಲ್ಲಿ ಬಾಂಬ್ ಇಟ್ಟಿದ್ದೇನೆ, ಕರೆ ಮಾಡಿದ ಕಿಡಿಗೇಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖ್ಯಾತ ಬಾಲಿವುಡ್ ನಟರಾದ ಅಮಿತಾಬ್ ಬಚ್ಚನ್, ಧರ್ಮೇಂದ್ರ ಹಾಗೂ ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆ ಎಂದು ಅಪರಿಚಿತ ವ್ಯಕ್ತಿಗಳು ಪೊಲೀಸರಿಗೆ ಕರೆ ಮಾಡಿದ್ದಾರೆ.

ನಾಗ್‌ಪುರ ಪೊಲೀಸರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಮೂವರ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಯಾವುದೇ ಬಾಂಬ್ ಈವರೆಗೂ ಪತ್ತೆಯಾಗಿಲ್ಲ. ಹಾಗಾಗಿ ಇದನ್ನು ಹುಸಿ ಬಾಂಬ್ ಕರೆ ಎಂದು ಹೇಳಲಾಗಿದೆ. ಈ ರೀತಿ ಯಾರೋ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಯಾಮಾರಿಸಿದ್ದಾರೆ ಎನ್ನಲಾಗಿದೆ.

ಬಾಂಬ್ ಇಟ್ಟಾಗಿದೆ, ದಾದರ್‌ನಲ್ಲಿ ಶಸ್ತ್ರಸಜ್ಜಿತ 25 ಜನರು ಭಯೋತ್ಪಾದಕ ದಾಳಿ ಮಾಡಲು ಸಜ್ಜಾಗಿದ್ದಾರೆ ಎಂದು ಕರೆ ಬಂದಿದೆ. ಅಭಿಮಾನಿಗಳು ಹಾಗೂ ನಟರಿಗೆ ಸಹಜವಾಗಿ ಆತಂಕ ಎದುರಾಗಿದೆ, ಹುಸಿ ಬಾಂಬ್ ಕರೆ ಎಂದು ತಿಳಿದ ನಂತರ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!