ಅಮಿತಾಬ್‌ ಬಚ್ಚನ್‌ಗೆ ಮತ್ತೊಮ್ಮೆ ಕೊರೊನಾ ಸೋಂಕು:‌ ಹೋಂ ಐಸೋಲೇಟ್‌ ಆದ ಬಿಗ್‌ ಬಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ಜನ ಸಾಮಾನ್ಯರ ಜೊತೆಗೆ ಎಲ್ಲ ರೀತಿಯ ಮುಂಜಾಗ್ರತೆ ವಹಿಸುವ ಸೆಲೆಬ್ರಿಟಿಗಳೂ ಸಹ ದಿನೇ ದಿನೇ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತೊಮ್ಮೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಹಾಗಾಗಿ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು ವೈದ್ಯರು ಸೂಚಿಸಿದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.

ಈ ಬಗ್ಗೆ ಅಮಿತಾಬ್ ಟ್ವೀಟ್ ಮಾಡಿದ್ದು, “ನನಗೆ ಕೊರೊನಾ ಸೋಂಕು ತಗುಲಿದೆ. ಇತ್ತೀಚೆಗೆ ನನ್ನನ್ನು ಭೇಟಿಯಾದವರೆಲ್ಲ ಕೊರೊನಾ ಪರೀಕ್ಷೆಗೆ ಒಳಗಾಗಬೇಕು ಎಂದು ಅಮಿತಾಬ್‌ ಹೇಳಿದ್ದಾರೆ. ಅಮಿತಾಬ್  ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ. ಅಮಿತಾಬ್‌ಗೆ ಕೊರೊನಾ ಸೋಂಕು ತಗುಲಿರುವುದರಿಂದ ಜನಪ್ರಿಯ ದೂರದರ್ಶನ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿ’ ಹೊಸ ಸೀಸನ್‌ನ ಚಿತ್ರೀಕರಣವನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!