SHOCKING | ನೆಲಕ್ಕುರುಳಿದ ‘ಮೆಟ್ರೋ’ ಪಿಲ್ಲರ್ ರಾಡ್: ತಾಯಿ, ಮಗು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿತಗೊಂಡು ತಾಯಿ ಮಕ್ಕಳು ಸಾವನ್ನಪ್ಪಿರುವ ಘಟನೆ ಇಂದು ಬೆಂಗಳೂರಿನ ನಾಗವಾರದ ಬಳಿ ನಡೆದಿದೆ.

ಬೆಂಗಳೂರಿನ ಹೆಚ್‌ಬಿಆರ್‌ ಲೇಔಟ್‌ ನಲ್ಲಿ ಬೆಳಿಗ್ಗೆ ಸುಮಾರು 10 ರಿಂದ 10:30ರ ವೇಳೆಗೆ ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ಸ್ಕೂಟಿಯಲ್ಲಿ ಸಂಚರಿಸುವ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಮೃತದುರ್ದೈವಿಗಳು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ.

ಮೆಟ್ರೋ ಹಂತದ 2 ಬಿ ಕಾಮಗಾರಿಯು ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಅದೇ ವೇಳೆ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪತಿ, ಪತ್ನಿ ತೇಜಸ್ವಿನಿ ಹಾಗೂ ಮಗ ವಿಹಾನ್‌ ಮೇಲೆ ರಾಡ್‌ ಬಿದ್ದಿದೆ. ಅದರ ಪರಿಣಾಮ ತಾಯ ಮಗುವಿನ ಸ್ಥೀತಿ ಗಂಭೀರಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಮಗ ಇಬ್ಬರೂ ತೀರಿಹೋಗಿದ್ದಾರೆ.

ಬೈಕ್‌ನಲ್ಲಿದ್ದ ತೇಜಸ್ವಿನಿ ಪತಿಯ ಸ್ಥಿತಿಯು ಚಿಂತಾಜನಕವಾಗಿದೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!