ಅಲಿಗಢದ ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ, ಮಹಿಳೆ ಸಾವು, 65 ಮಂದಿ ಅಸ್ವಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದಲ್ಲಿನ ಅಲಿಗಢದ ಮಾಂಸದ ಕಾರ್ಖಾನೆಯೊಂದರಲ್ಲಿ ಅಮೋನಿಯಾ ಗ್ಯಾಸ್ ಸೊರಿಕೆಯಾಗಿದ್ದು, ಮಹಿಳೆ ಮೃತಪಟ್ಟಿದ್ದಾರೆ.

ಅವಘಡದಲ್ಲಿ 65 ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ಯಾಕಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರು ಉಸಿರುಗಟ್ಟಿದ್ದಾರೆ. ವಿಷಯ ತಿಳಿದಂತೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಗ್ಯಾಸ್ ಪೈಪ್ ಒಡೆದು ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!