ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದನಾಗಿ ಆಯ್ಕೆಯಾಗಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್ ನ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಸಿದಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಲೋಕಸಭೆ ಅಧಿವೇಶನದಲ್ಲಿ ಮಾತನಾಡಿದ ಚರಣ್‌ಜಿತ್ ಸಿಂಗ್ ಚನ್ನಿ, ‘ಸುಮಾರು 20 ಲಕ್ಷ ಜನ ಅಮೃತ್‌ಪಾಲ್ ಸಿಂಗ್‌ಗೆ ಮತ ಹಾಕಿ, ಗೆಲ್ಲಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಆತನನ್ನು ಜೈಲಿಗೆ ಕಳುಹಿಸುವ ಮೂಲಕ ಕೇಂದ್ರ ಸರ್ಕಾರವು ಆತನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ. ಇದು ಕೂಡ ತುರ್ತು ಪರಿಸ್ಥಿತಿಗೆ ಸಮನಾಗಿದೆ’ ಎಂಬುದಾಗಿ ಚನ್ನಿ ಹೇಳಿದ್ದಾರೆ.
ಅಮೃತ್ ಪಾಲ್ ಸಿಂಗ್ ಖಡೂರ್ ಸಾಹೀಬ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಕಾಂಗ್ರೆಸ್ ಅಭ್ಯರ್ಥಿ ಕುಲ್ಬೀರ್ ಸಿಂಗ್ ವಿರುದ್ಧ 2 ಲಕ್ಷ ವೋಟುಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾನೆ. ಈತನನ್ನು ಅಸ್ಸಾಂನ ದಿಬ್ರುಗಢ ಜೈಲಿನಲ್ಲಿ ಇರಿಸಲಾಗಿದೆ.