ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ: ಗಮನ ಸೆಳೆದ ಮೆರವಣಿಗೆ- ಯೋಧರಿಗೆ ಗೌರವಾರ್ಪಣೆ

ಹೊಸದಿಗಂತ ವರದಿ, ಮಡಿಕೇರಿ:

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಮತ್ತಿತರರು ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಬಳಿಕ ನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮತ್ತಿತರರು ವಿಶೇಷ ಪ್ರಾರ್ಥನೆ ಸಲ್ಲಿಸಿ ಭಾರತಾಂಬೆ ಹಾಗೂ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಎನ್‍ಸಿಸಿ ತಂಡ, ಪೂಜಾ ಕುಣಿತ, ಗೆಜ್ಜೆ ಹಾಗೂ ಗೊಂಬೆ ಕುಣಿತ ಇತರ ಕಲಾ ತಂಡಗಳು ಪಾಲ್ಗೊಂಡು ಗಮನ ಸೆಳೆದವು
ಮೆರವಣಿಗೆ ಸಂದರ್ಭದಲ್ಲಿ ಸ್ಕ್ವಾಡ್ರರ್ನ್ ಲೀಡರ್ ಅಜ್ಜಮಾಡ ದೇವಯ್ಯ, ಮಂಗೇರಿರ ಮುತ್ತಣ್ಣ, ಕುವೆಂಪು, ಜನರಲ್ ಕೆ.ಎಸ್.ತಿಮ್ಮಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಗುಡ್ಡೆಮನೆ ಅಪ್ಪಯ್ಯಗೌಡ ಅವರ ಪ್ರತಿಮೆ/ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!