ದೇಶಾದ್ಯಂತ ಏಕಾಂಗಿ ಪಯಣ ಪೂರೈಸಿ ಇಂದು ಬೆಂಗಳೂರಿಗೆ ಕಾಲಿಡ್ತಾರೆ ಅಮೃತಾ ಜೋಶಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಸರಗೋಡು ಜಿಲ್ಲೆಯ ಕುಂಬಳೆಯ ಸಾಹಸಿ ಯುವತಿ ಅಮೃತಾ ಜೋಶಿ ಅವರು ಕಳೆದ 3 ತಿಂಗಳುಗಳಿಂದ ದೇಶದ ಏಕತೆಗಾಗಿ ಏಕಾಂಗಿಯಾಗಿ ಬೈಕ್‌ನಲ್ಲಿ ದೇಶದಾದ್ಯಂತ ಪರ್ಯಟನೆ ನಡೆಸುತ್ತಿದ್ದು, ಅದರಂತೆ ಆ.2ರಂದು ಬೆಂಗಳೂರು ತಲುಪಲಿದ್ದಾರೆ.
ಬೆಂಗಳೂರಿನಲ್ಲಿ ಉದ್ಯೋಗಾರ್ಥ ನೆಲೆಸಿರುವ ಕಾಸರಗೋಡು ನಿವಾಸಿಗಳ ಸಂಘಟನೆಯಾದ ವಿಕಾಸ ಟ್ರಸ್ಟ್ , ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವುಗಳ ಸಹಯೋಗದಲ್ಲಿ ಸಂಜೆ 5 ಗಂಟೆಗೆ ಬೆಂಗಳೂರು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‌ಕುಮಾರ್ ಗಾಜಿನ ಸಭಾಂಗಣದಲ್ಲಿ ಅಮೃತಾ ಜೋಶಿಗೆ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಹಿರಿಯ ಉದ್ಯಮಿ ಟಿ.ವಿ.ಮೋಹನದಾಸ್ ಪೈ ಭಾಗವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಅಧ್ಯಕ್ಷತೆ ವಹಿಸಲಿದ್ದಾರೆ.

ತ್ರಿವರ್ಣ ಧ್ವಜದೊಂದಿಗೆ ಕಾರ್ಯಕ್ರಮದ ವ್ಯವಸ್ಥೆ

ಬೆಂಗಳೂರಿನಲ್ಲಿ ನೆಲೆಸಿರುವ ಕಾಸರಗೋಡು ಮೂಲದ ಹಲವಾರು ಮಂದಿ ಗಣ್ಯರು ಮತ್ತು ನೂರಾರು ಜನರು ತ್ರಿವರ್ಣ ಧ್ವಜಗಳೊಂದಿಗೆ ಕಾಸರಗೋಡು ಗಡಿನಾಡ ಕನ್ನಡತಿ, ಸಾಹಸಿ ಯುವತಿ ಅಮೃತಾ ಜೋಶಿಯವರನ್ನು ಸ್ವಾಗತಿಸಲಿದ್ದು , ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಕಾಸರಗೋಡಿನವರ ಕಾರ್ಯಕ್ರಮಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗ ದೊರೆತಿರುವುದು ಗಡಿನಾಡ ಕನ್ನಡಿಗರಿಗೆ ಸಂದ ಗೌರವವಾಗಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಕಾಸರಗೋಡಿನ ಎಲ್ಲರೂ ಈ ಸಮಾರಂಭದಲ್ಲಿ ಭಾಗವಹಿಸಬೇಕೆಂದು ವಿಕಾಸ್ ಟ್ರಸ್‌ನ ಅಧ್ಯಕ್ಷ ರವಿನಾರಾಯಣ ಗುಣಾಜೆ ವಿನಂತಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!