ಅಮೃತಕಾಲ Vs ವಿನಾಶಕಾಲ: ‘ಕೈ’ ವಿರುದ್ಧ ಬಿಜೆಪಿ ಪೋಸ್ಟ್ ವಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ರಾಜ್ಯ ಕಾಂಗ್ರೆಸ್ ಸರ್ಕಾರ ವರ್ಸಸ್‌ ಕೇಂದ್ರ ಬಿಜೆಪಿ ಸರ್ಕಾರ ಎನ್ನುವಂತಾಗಿದೆ ಪರಿಸ್ಥಿತಿ. ಎರಡೂ ಪಕ್ಷಗಳಿಂದ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಗುರುವಾರವಷ್ಟೇ ಸಿಎಂ ಸಿದ್ದರಾಮಯ್ಯ ಬಿಜೆಪಿ ಬಗ್ಗೆ ಸರಣಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದರು. ಇದೀಗ ಬಿಜೆಪಿ ಸರ್ಕಾರ ಟ್ವೀಟ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿದೆ. ಅಮೃತಕಾಲ Vs ವಿನಾಶಕಾಲ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಹತ್ತು ವರ್ಷಗಳ ಅವಧಿಗೆ (2004-2014) ಹೋಲಿಸಿದರೆ, ಪ್ರಧಾನಿ ಮೋದಿ ಅವರ ಸರ್ಕಾರವು ಮೆಟ್ರೋ ರೈಲು, ಬ್ರಾಡ್‌ಗೇಜ್‌, ಡಿಬಿಟಿ ಪ್ರಯೋಜನ ಮತ್ತು ಡೇಟಾ ಬಳಕೆಯಲ್ಲಿ ಗಮನಾರ್ಹ ಏರಿಕೆ ಕಂಡಿದೆ ಎಂಬ ಅಂಕಿಅಂಶಗಳನ್ನು ಬಿಜೆಪಿ ಪೋಸ್ಟ್ ಮಾಡಿದೆ. ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಆದ್ಯತೆ! ಎಂಬ ಫೋಟೋ ಸಹಿತ ಅಂಕಿಅಂಶಗಳನ್ನು ಬಿಜೆಪಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!