ಲಂಡನ್‍ಗೆ ಹಾರಲು ಯತ್ನಿಸಿದ ಅಮೃತ್‌ಪಾಲ್ ಸಿಂಗ್ ಪತ್ನಿಗೆ ವಿಮಾನ ನಿಲ್ದಾಣದಲ್ಲಿ ತಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಅಮೃತ್‌ಪಾಲ್ ಸಿಂಗ್ (Amritpal Singh) ಪತ್ನಿ ಕಿರಣ್‍ದೀಪ್ ಕೌರ್ (Kirandeep Kaur) ಲಂಡನ್‍ಗೆ ತೆರಳಲು ಯತ್ನಿಸುತ್ತಿದ್ದಾಗ ಪಂಜಾಬ್ ನ ಅಮೃತಸರ ವಿಮಾನ ನಿಲ್ದಾಣದಲ್ಲಿ (Amritsar Airport) ವಶಕ್ಕೆ ಪಡೆಯಲಾಗಿದೆ.

ಕಿರಣ್‍ದೀಪ್‍ಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಪಂಜಾಬ್ ಪೊಲೀಸ್ ಮೂಲಗಳ ಪ್ರಕಾರ, ಕಿರಣ್ ದೀಪ್ ಇಂಗ್ಲೆಂಡ್‍ನ ಪ್ರಜೆಯಾಗಿದ್ದಾಳೆ. ಅಷ್ಟೇ ಅಲ್ಲದೇ ಪಂಜಾಬ್ ಹಾಗೂ ದೇಶದ ಯಾವುದೇ ಭಾಗದಲ್ಲಿ ಯಾವುದೇ ಪ್ರಕರಣವು ದಾಖಲಾಗಿಲ್ಲ.ಆದರೆ ತಲೆಮರೆಸಿಕೊಂಡಿರುವ ಆರೋಪಿಗಳ ಕುಟುಂಬ ಮತ್ತು ಪರಿಚಯಸ್ಥರನ್ನು ವಿಚಾರಣೆಗೆ ಒಳಪಡಿಸಿದ ಕಾನೂನು ಪ್ರಕ್ರಿಯೆಯ ಅಡಿಯಲ್ಲಿ ಕಿರಣ್‍ದೀಪ್ ಕೌರ್‌ನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ, ಮಾರ್ಚ್‍ನಲ್ಲಿ ಅಮೃತ್‌ಪಾಲ್ ಸಿಂಗ್‍ನ ದೇಶದ್ರೋಹಿ ಚಟುವಟಿಕೆಗಳಿಗೆ ವಿದೇಶಿ ಧನಸಹಾಯ ನಡೆದಿರುವ ಬಗ್ಗೆ ಅಲ್ಲಿನ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಇದಕ್ಕೆ ಸಂಬಂಧಿಸಿದಂತೆ ಪಂಜಾಬ್‍ನ ಜಲ್ಲುಪುರ್ ಖೇಡಾ ಗ್ರಾಮದಲ್ಲಿ ಆಕೆಯನ್ನು ಪ್ರಶ್ನಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!