ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ಕೋಚಿಂಗ್ ಕ್ಲಾಸ್‌ನಲ್ಲಿ ಕುಳಿತಿದ್ದ ಯುವಕನಿಗೆ ಹೃದಯಾಘಾತವಾಗಿದೆ.
ಸ್ನೇಹಿತರೊಂದಿಗೆ ಕುಳಿತು ಲೋಕಸೇವಾ ಆಯೋಗದ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ 18 ವರ್ಷದ ಯುವಕನಿಗೆ ಹೃದಯಾಘಾತವಾಗಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಯುವಕ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಯುವಕನೋರ್ವನಿಗೆ ಹೃದಯಾಘಾತವಾಗುವ ಭಯಾನಕ ದೃಶ್ಯವೊಂದು ಇಂದೋರ್ನಲ್ಲಿ ಬೆಳಕಿಗೆ ಬಂದಿದೆ. ಕೋಚಿಂಗ್ ಸೆಂಟರ್ ನಲ್ಲಿ ಕೋಚಿಂಗ್ ಪಡೆಯುವ ವೇಳೆ ಯುವಕನಿಗೆ ಹೃದಯಾಘಾತವಾಗುತ್ತದೆ.#indore #heartattack #student #coaching pic.twitter.com/SrhtW64WC4
— Harshith Achrappady (@HAchrappady) January 18, 2024