ಕೊಳವೆಬಾವಿಗೆ ಬಿದ್ದ 8 ವರ್ಷದ ಬಾಲಕ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಧ್ಯಪ್ರದೇಶದಲ್ಲಿ 8 ವರ್ಷದ ಬಾಲಕ ಆಕಸ್ಮಿಕವಾಗಿ ಬೋರ್‌ವೆಲ್‌ಗೆ ಬಿದ್ದಿದ್ದಾನೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾಲಕನನ್ನು ಸುರಕ್ಷಿತವಾಗಿ ಹೊರತರಲು ಹರಸಾಹಸ ಪಡುತ್ತಿದ್ದಾರೆ. ಬೇತುಲ್ ಜಿಲ್ಲೆಯ ಮಾಂಡವಿಯ ರೈತ ನಾನಕ್ ಚೌಹಾಣ್ ಎರಡು ವರ್ಷಗಳ ಹಿಂದೆ ತಮ್ಮ ಹೊಲದಲ್ಲಿ ಬೋರ್ ಕೊರೆಸಿದ್ದರು.

ನೀರು ಖಾಲಿಯಾಗಿ ಬಳಕೆಗೆ ಯೋಗ್ಯವಾಗಿಲ್ಲ ಹಾಗಾಗಿ ಬಾವಿಯನ್ನು ಮುಚ್ಚಿದ್ದೆವು ಆದರೂ ಬಾವಿಗೆ ಹೇಗೆ ಬಿದ್ದೆನೋ ಗೊತ್ತಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಬಾಲಕ ಕೊಳವೆಬಾವಿ ಎಷ್ಟು ಆಳದಲ್ಲಿ ಇದ್ದಾನೆ ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕನಿಗೆ ಆಮ್ಲಜನಕ ಸಿಗುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಜತೆಗೆ ಕೊಳವೆಬಾವಿಗೆ ಸಮಾನಾಂತರವಾಗಿ ಹೊಂಡ ಕೊರೆದು ಬಾಲಕನನ್ನು ಹೊರ ತೆಗೆಯುವ ವ್ಯವಸ್ಥೆ ಮಾಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!