ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದಲ್ಲಿ ಅವಘಡ, ಮಹಿಳೆಯ ತಲೆಗೆ ಬಿತ್ತು ಹಲಸಿನ ಕಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯೊಬ್ಬರು ಆಸ್ಪತ್ರೆ ಪಾಲಾಗಿರುವ ಘಟನೆ ಆನೇಕಲ್‌ನಲ್ಲಿ ನಡೆದಿದೆ. ಮೈಸೂರಿನಲ್ಲಿ ಇಂದು ಯೋಜನೆಗೆ ಚಾಲನೆ ಹಿನ್ನೆಲೆ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅದರಂತೆ ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್​ನಲ್ಲೂ ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಮಂಟಪ ಗ್ರಾಮ ಪಂಚಾಯಿತಿ ಬಳಿ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆ ಮೇಲೆ ಹಲಸಿನ ಕಾಯಿ ಬಿದ್ದು, ಆಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳಿಸಿಕೊಡಲಾಯಿತು.

ಕಾರ್ಯಕ್ರಮಕ್ಕೆ ಬಂದಿರುವ ಮಹಿಳೆಯರಿಗೆ ಕುಳಿತುಕೊಳ್ಳಲು ಸರಿಯಾದ ವ್ಯವಸ್ಥೆಯಿಲ್ಲದೆ, ಪರದಾಡುವ ಸ್ಥಿತಿ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!