ಹೊಸದಿಗಂತ ವರದಿ,ಬಳ್ಳಾರಿ:
ನಗರದ ಹೃದಯ ಭಾಗ ರಾಯಲ್ ವೃತ್ತದಲ್ಲಿ ಅಳವಡಿಸಿದ ಸಿಸಿ ಕ್ಯಾಮರಾಗಳಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಮಂಗಳವಾರ ನಂದಿಸಿದ ಘಟನೆ ಮಂಗಳವಾರ ನಡೆದಿದೆ. ನಗರದ ಮಹಾನಗರ ಪಾಲಿಕೆ ಕಚೇರಿ ಎದುರು ಇರುವ ಕಂಬವೊಂದಕ್ಕೆ ಸುಮಾರು ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಏಕಾಏಕಿ ಕಂಬದಲ್ಲಿ ವಿದ್ಯುತ್ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಗಮನಿಸಿದ ಅಧಿಕಾರಿಗಳು ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ಮುಟ್ಟಿಸಿದ್ದಾರೆ, ಕೂಡಲೇ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿಗಳು ಬೆಂಕಿ ನಂದಿಸಿದರು. ಈ ವೇಳೆ ಸುಗಮ ಸಂಚಾರಕ್ಕೆ ಕೆಲಕಾಲ ಅಡ್ಡಿಯಾಯಿತು. ಕೆಲ ಕ್ಯಾಮರಾಗಳು ಸುಟ್ಟು ಕರಕಲಾಗಿವೆ ಎಂದು ಸಿಬ್ಬಂದಿಗಳು ತಿಳಿಸಿದರು.