ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಣತಿ ವರದಿ ಬಗ್ಗೆ ಚರ್ಚಿಸಲು ಕೂಡಲೇ ಸರ್ವ ಪಕ್ಷಗಳ ಸಭೆ ಕರೆಯಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಜಾತಿಗಣತಿಗೆ ಜೆಡಿಎಸ್ ವಿರೋಧ ಮಾಡಲ್ಲ. ಆದರೆ ಸಮೀಕ್ಷೆ ಮಾಡಿರೋ ವ್ಯವಸ್ಥೆ ಸರಿಯಿಲ್ಲ. ಹೀಗಾಗಿ ಕೂಡಲೇ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು ವರದಿ ಬಗ್ಗೆ ಚರ್ಚೆ ಮಾಡಬೇಕು. ವರದಿಯನ್ನ ಸಾರ್ವಜನಿಕವಾಗಿ ಬಿಡುಗಡೆ ಮಾಡಿ ಚರ್ಚೆ ಮಾಡಬೇಕು ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.