ಮಗುವಿನ ಶವ ಸಾಗಿಸಲು ಸಿಗದ ಆಂಬುಲೆನ್ಸ್: ಹೆಗಲ ಮೇಲೆ ಹೊತ್ತು ಸಾಗಿದ ತಂದೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಗುವಿನ ಶವ ಸಾಗಿಸಲು ಆಂಬುಲೆನ್ಸ್ ಇಲ್ಲದೇ ತಂದೆ ಮೃತದೇಹವನ್ನ ಹೆಗಲ ಮೇಲೆ ಹೊತ್ತುಕೊಂಡು ಸಾಗಿರುವ ಕರುಣಾಜನಕ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಅಧಿಕಾರಿಗಳು ಶವ ಸಾಗಿಸಲು ವಾಹನವನ್ನು ನೀಡದ ಹಿನ್ನೆಲೆ ನಾಲ್ಕು ವರ್ಷದ ಮಗುವಿನ ಮೃತದೇಹವನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಬೇಕಾಯಿತು.
ಆರೋಗ್ಯ ಹದಗೆಟ್ಟಿದ್ದರಿಂದ ಚಿಕಿತ್ಸೆಗಾಗಿ ಮಗುವನ್ನು ಸೋಮವಾರ ಬಕ್ಸ್‌ವಾಹಾ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತು. ನಂತರ ಮಂಗಳವಾರ ಮನೆಯವರು ಬಾಲಕಿಯನ್ನು ಪಕ್ಕದ ದಮೋಹ್‌ನಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಆದರೆ ಅದೇ ದಿನ ಬಾಲಕಿ ಸಾವನ್ನಪ್ಪಿದ್ದು. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಸ್ಪತ್ರೆಯ ಸಿಬ್ಬಂದಿಗೆ ಆಂಬ್ಯುಲೆನ್ಸ್ ಕೇಳಿದರೂ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ಬಾಲಕಿಯ ಅಜ್ಜ ಮನ್ಸುಖ್ ಅಹಿರ್ವಾರ್ ಆರೋಪಿಸಿದ್ದಾರೆ.ಖಾಸಗಿ ವಾಹನ ವ್ಯವಸ್ಥೆ ಮಾಡಲು ನಮ್ಮಲ್ಲಿ ಹಣವಿಲ್ಲದ ಕಾರಣ ನಾವು ಬಾಲಕಿಯ ದೇಹವನ್ನು ಕಂಬಳಿಯಲ್ಲಿ ಸುತ್ತಿ ಬಕ್ಸ್ವಾಹಾಗೆ ಬಸ್ ಹತ್ತಿದೆವು ಎಂದು ಅವರು ಹೇಳಿದ್ದಾರೆ.
ಆದರೆ ಅಧಿಕಾರಿಗಳು ಬಾಲಕನ ಕುಟುಂಬಸ್ಥರ ಆರೋಪವನ್ನ ತಳ್ಳಿಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!