ಹೊಸ ದಿಗಂತ ಡಿಜಿಟಲ್ ಡೆಸ್ಕ್;
ಬೆಂಗಳೂರಿನಲ್ಲೂ ದೇಶ ವಿರೋಧಿ ಬರಹ ಕಂಡುಬಂದಿದೆ. ನಗರದ ಕೊಡಿಗೇಹಳ್ಳಿಯಲ್ಲಿಯ ಅಪಾರ್ಟ್ಮೆಂಟ್ನ ಗೋಡೆಯ ಮೇಲೆ “ನಾನು ಭಾರತವನ್ನು ಸ್ಫೋಟಿಸುತ್ತೇನೆ” (I am going to blast india) ಎಂದು ಇಂಗ್ಲಿಷ್ನಲ್ಲಿ ಬರೆಯಲಾಗಿದೆ.
ಈ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ದೇಶ ವಿರೋಧಿ ಬರಹ ಬರೆದ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.