ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣಿ ಗುತ್ತಿಗೆ ಪರವಾನಗಿ ನವೀಕರಣಕ್ಕೆ ಲಂಚ ಪಡೆಯಲಾಗಿದೆ ಎಂಬ ಆರೋಪಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು. ಈ ಆರೋಪಗಳೆಲ್ಲ ಜನರನ್ನು ಮರುಳು ಮಾಡುವ ಯತ್ನಗಳಷ್ಟೇ, ತಮ್ಮ ವಿರುದ್ಧದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದಾರೆ.
ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
2015 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್-1957 ಕಾಯ್ದೆಯಲ್ಲಿ ನವೀಕರಣವು 20 ವರ್ಷಗಳ ಅವಧಿಗೆ ಅನ್ವಯವಾಗುತ್ತಿತ್ತು. ಅದರ ಪ್ರಕಾರ ಸರ್ಕಾರವು ಗಣಿ ಗುತ್ತಿಗೆಯ ನವೀಕರಣಕ್ಕೆ ಫಾರೆಸ್ಟ್ ಕ್ಲಿಯರೆನ್ಸ್‌ನ್ನು ಪಡೆದುಕೊಳ್ಳುವ ಸಲುವಾಗಿ ಮಾತ್ರ ಷರತ್ತುಬದ್ಧ ತಾತ್ವಿಕ ಅನುಮೋದನೆ ನೀಡಲಾಗಿದೆ. ಎಂದು ಎಕ್ಸ್ ಸಂದೇಶದಲ್ಲಿ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.