ಹೊಸದಿಗಂತ ವಿಜಯನಗರ:
ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿರುವ ಎರಡು ಕಿರಾಣಿ ಅಂಗಡಿಗಳು ಸರಣಿ ಕಳ್ಳತನವಾಗಿರುವ ಘಟನೆ ನಡೆದಿದೆ.
ಹೊಸಪೇಟೆ ನಗರಸಭೆ ಮುಂಭಾಗದ ಮುಖ್ಯ ರಸ್ತೆಯಲ್ಲಿರವ ರಾಮ್ದೇವ್ ಜನರಲ್ ಸ್ಟೋರ್ , ಎನ್.ಕೆ.ದೀಪಾಲಿ ಜನರಲ್ ಸ್ಟೋರ್ ಎಂಬ ಹೋಲ್ ಸೇಲ್ ಅಂಗಡಿಗಳಲ್ಲಿ ಕಳ್ಳತನವಾಗಿದೆ. ಎಂದಿನಂತೆ ಬುಧವಾರ ರಾತ್ರಿ ಅಂಗಡಿಗಳನ್ನು ಬಂದ್ ಮಾಡಿದ್ದು, ಗುರುವಾರ ಬೆಳಗ್ಗೆ ಅಂಗಡಿ ತೆರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಎರಡೂ ಅಂಗಡಿಗಳ ಶೆಟರ್ ಭಾಗಶಃ ಮುರಿದು, ಕಳ್ಳತನ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸ್ಥಳಕ್ಕೆ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.