ಅಂಡಮಾನ್‌-ನಿಕೋಬಾರ್‌ ದ್ವೀಪದಲ್ಲಿ ನಡುರಾತ್ರಿ ಭೂಕಂಪ, 4.4ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ ಸಂಭವಿಸಿದೆ. ಸೋಮವಾರ (ಮೇ 9, 2022) ಮಧ್ಯರಾತ್ರಿ 1.11 ಗಂಟೆಗೆ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿ ಹಠಾತ್ ಭೂಕಂಪ ಸಂಭವಿಸಿದೆ. ಭೂಕಂಪಗಳ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಬಹಿರಂಗಪಡಿಸಿದೆ. ಕ್ಯಾಂಪ್ಬೆಲ್ ಕರಾವಳಿಯಿಂದ 85 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಕೇಂದ್ರಬಿಂದು ವರದಿಯಾಗಿದೆ. ಭೂಕಂಪದಿಂದಾಗಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಂಡಮಾನ್ ದ್ವೀಪದಲ್ಲಿ ಹತ್ತು ದಿನಗಳಲ್ಲಿ ಇದು ಎರಡನೇ ಭೂಕಂಪವಾಗಿದೆ. ಏಪ್ರಿಲ್ 30 ರಂದು ಬೆಳಿಗ್ಗೆ 11.04 ಕ್ಕೆ ದಿಗ್ಲಿಪುರದಲ್ಲಿ ಭೂಕಂಪ ಸಂಭವಿಸಿದೆ ಎಂದು NCS ಹೇಳಿದೆ. ಆಗ ರಿಕ್ಟರ್ ಮಾಪಕದಲ್ಲಿ 4.9 ರಷ್ಟು ತೀವ್ರತೆ ದಾಖಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!