RAPE | ನೆಲಮಂಗಲದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನಲ್ಲಿಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಹರೀಶ್‌ ಮನೆಯಲ್ಲಿ ಕುಟುಂಬವೊಂದು ಬಾಡಿಗೆಗೆ ಬಂದಿತ್ತು, ಕುಟುಂಬದಲ್ಲಿದ್ದ ಬಾಲಕಿ ಒಬ್ಬಳೇ ಇದ್ದ ವೇಳೆ ಹರೀಶ್‌ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಮನೆಯವರು ಕೆಲಸ ಮುಗಿಸಿ ಬಂದಾಗ ಬಾಲಕಿ ರಕ್ತಸ್ರಾವದಿಂದ ಬಳಲುತ್ತಿದ್ದಳು. ಬಾಲಕಿ ಹರೀಶ್‌ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ನಿಮ್ಮ ಸುತ್ತಮುತ್ತ ಇರುವ ಗಂಡಸರ ಬಗ್ಗೆ ಸೂಕ್ಷ್ಮವಾಗಿ ನಿಗಾ ಇಡಿ, ಹಾನಿಕಾರಕ ಎಂದು ಸಣ್ಣ ಸುಳಿವು ಸಿಕ್ಕರೂ ಇಗ್ನೋರ್‌ ಮಾಡಬೇಡಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!