ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಲಕ್ಕೆ ತೆರಳಿದ್ದ ರೈತನ ಮೇಲೆ ಆನೆ ದಾಳಿ ನಡೆಸಿರುವ ಘಟನೆ ತಡರಾತ್ರಿ ಮೈಸೂರಿನಲ್ಲಿ ನಡೆದಿದೆ. ಸರಗೂರು ತಾಲೂಕಿನ ಕುಂದೂರು ಗ್ರಾಮದ ಹೊರವಲಯದಲ್ಲಿ ರಾತ್ರಿ ರೈತ ಸಿದ್ದರಾಜ ನಾಯ್ಕ ಎಂಬುವರ ಮೇಲೆ ದಾಳಿ ನಡೆಸಿ, ಗಂಭೀರ ಗಾಯಗೊಳಿಸಿದೆ.
ತಮ್ಮ ಕೃಷಿ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕಾವಲಿಗೆಂದು ತೆರಳಿದ್ದ ವೇಳೆ ಈ ದುರಂತ ನಡೆದಿದೆ. ಮಾಹಿತಿ ಪಡೆದ ಕುಟುಂಬಸ್ಥರು ತಕ್ಷಣವೇ ಸಿದ್ಧರಾಜು ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಪ್ರಸ್ತುತ ರೈತನ ಸ್ಥಿತಿ ಗಂಭೀರವಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.