ಕ್ಷಣಕ್ಷಣಕ್ಕೂ ಪ್ರಕರಣಕ್ಕೆ ರೋಚಕ ತಿರುವು: ದರ್ಶನ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ ಪವಿತ್ರಾ ಗೌಡ ಅವರ ಬಗ್ಗೆ ಅಮಾನುಷ ಪೋಸ್ಟ್ ಗಳು ಬಂದ ಹಿನ್ನಲೆಯಲ್ಲಿ ರೇಣುಕಾಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಬಂಧನದ ಬೆನ್ನಲ್ಲೇ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರ ಅಲಿಯಾಸ್ ರಘು ದರ್ಶನ್ ಅವರನ್ನೂ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ತೂಗುದೀಪ ಸೇನೆ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಘು ದರ್ಶನ್ ಅವರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ರಘು ದರ್ಶನ್ ನೆರವಿನಿಂದ ರೇಣುಕಾಸ್ವಾಮಿ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ದರ್ಶನ್ ಕಳುಹಿಸಿದ್ದರು ಎನ್ನಲಾಗಿದೆ. ರೇಣುಕಾಸ್ವಾಮಿಯನ್ನು ಕೊಲೆ ಮಾಡಲು ಬೆಂಗಳೂರಿಗೆ ಕರೆದುಕೊಂಡು ಹೋಗುವ ಯೋಜನೆಗೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!