ರಾಜ್ಯಪಾಲರ ಪತ್ರಗಳ ವಿರುದ್ಧ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರ ನಡುವೆ ಸಂಘರ್ಷ ತಾರಕಕ್ಕೇರಿದ್ದು, ರಾಜ್ಯಪಾಲರು ತಕ್ಷಣ ಅಥವಾ ಇವತ್ತೇ ಮಾಹಿತಿ ಕಳುಹಿಸಿ ಎಂದು ಸೂಚಿಸುತ್ತಿದ್ದಾರೆ. ಎಲ್ಲಾ ನಿಯಮಾವಳಿ ಪರಿಶೀಲನೆ ಮಾಡಿ ಕ್ಯಾಬಿನೆಟ್ ನಿರ್ಣಯಿಸಿದೆ.

ಸರ್ಕಾರದ ವಿರುದ್ಧದ ಪ್ರತಿ ದೂರಿಗೂ ವಿವರಣೆಯನ್ನು ಕೇಳಿ ರಾಜ್ಯಪಾಲರು ಪತ್ರ ಬರೆಯುತ್ತಿದ್ದಾರೆ. ಅಲ್ಲದೇ ರಾಜ್ಯಪಾಲರ ಪತ್ರಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಲೆಕೆಡಿಸಿಕೊಂಡಿದ್ದಾರೆ. ಈ ಹಿನ್ನಲೆ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಕಾರ್ಯದರ್ಶಿಗಳು ಉತ್ತರಿಸದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಅಂಗೀಕಾರ ಮಾಡಲಾಗಿದೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸಿಎಸ್​ (ಸರ್ಕಾರದ ಮುಖ್ಯಕಾರ್ಯದರ್ಶಿ) ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ಯಾವುದೇ ಪತ್ರ ಬರೆದರೂ ಸಂಪುಟ ಗಮನಕ್ಕೆ ತರಲು ಸಿಎಸ್​ಗೆ ಸೂಚನೆ ನೀಡಲಾಗಿದ್ದು, ನೇರವಾಗಿ ರಾಜ್ಯಪಾಲರಿಗೆ ಉತ್ತರಿಸದಂತೆ ನಿರ್ಣಯ ಮೂಲಕ ಮುಖ್ಯಕಾರ್ಯದರ್ಶಿಗೆ ತಿಳಿಸಲಾಗಿದೆ. ಅಲ್ಲದೇ ರಾಜ್ಯಪಾಲರ ಪತ್ರವನ್ನು ಸಚಿವ ಸಂಪುಟದ ಗಮನಕ್ಕೆ ತರಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.

ನಿಯಮ ಪ್ರಕಾರ ಸರ್ಕಾರದ ಮುಖ್ಯಕಾರ್ಯದರ್ಶಿ ಸಂಪುಟದ ಗಮನಕ್ಕೆ ತರಬೇಕೆಂದು ನಿರ್ಣಯ ಅಂಗೀಕರಿಸಲಾಗಿದೆ. ಕಾರ್ಯದರ್ಶಿ ಬದಲು ಸಂಪುಟ ಮೂಲಕ ರಾಜ್ಯಪಾಲರ ಪತ್ರಗಳಿಗೆ ಸರ್ಕಾರದ ಉತ್ತರ ನೀಡಲು ನಿರ್ಧರಿಸಲಾಗಿದೆ. ಅಲ್ಲದೇ ಅಗತ್ಯವಿದ್ದರಷ್ಟೇ ಉತ್ತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಎಚ್​ಕೆ ಪಾಟೀಲ್, ಸಂಪುಟ ಸಭೆಯಲ್ಲಿ ರಾಜ್ಯಪಾಲರ ವಿರುದ್ಧ ತೆಗೆದುಕೊಂಡ ಮಹತ್ವದ ತೀರ್ಮಾನದ ಬಗ್ಗೆ ಸ್ಪಷ್ಟಪಡಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!