ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ಅಪಘಾತದಿಂದ ಕೋಮಾ ಸ್ಥಿತಿಯಲ್ಲಿರುವ ಭಾರತೀಯ ಮೂಲದ ವಿದ್ಯಾರ್ಥಿನಿಗೆ ತುರ್ತು ವೀಸಾ ನೀಡಲು ಅಮೆರಿಕ ಒಪ್ಪಿಗೆ ಸೂಚಿಸಿದೆ.
ಫೆ.14 ರಂದು ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 35 ವರ್ಷದ ನೀಲಂ ಶಿಂಧೆ ಸ್ಥಿತಿ ಗಂಭೀರವಾಗಿದೆ. ಆಕೆಯನ್ನು ಭಾರತಕ್ಕೆ ವಾಪಸ್ ಕರೆತರಲು ಮಹಾರಾಷ್ಟ್ರದ ಸತಾರದಲ್ಲಿರುವ ಆಕೆಯ ತಂದೆ ಅಂದಿನಿಂದ ವೀಸಾ ಪಡೆಯಲು ಪ್ರಯತ್ನಿಸುತ್ತಿದ್ದರು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.ಇದೀಗ ತುರ್ತು ವೀಸಾ ನೀಡಲು ಅಮೆರಿಕ ಒಪ್ಪಿಗೆ ಸೂಚಿಸಿದೆ.
ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ನೀಲಂ ಶಿಂಧೆ ಅವರ ಎದೆ ಮತ್ತು ತಲೆ ಭಾಗಕ್ಕೆ ತೀವ್ರ ಪೆಟ್ಟಾಗಿತ್ತು. ಎರಡು ದಿನಗಳ ನಂತರ ಅಪಘಾತದ ಬಗ್ಗೆ ಅವರ ಕುಟುಂಬಕ್ಕೆ ತಿಳಿದುಬಂದಿದೆ.