ಅಮೆರಿಕದಲ್ಲಿ ಪೊಲೀಸ್ ವಾಹನ ಡಿಕ್ಕಿ ಹೊಡೆದು ಭಾರತ ಮೂಲದ ಮಹಿಳೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ಸಿಯಾಟಲ್ ಪೊಲೀಸ್ ಗಸ್ತು ವಾಹನ ಡಿಕ್ಕಿ ಹೊಡೆದು ಭಾರತೀಯ ಮೂಲದ 23 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.

ಈ ಕುರಿತು ಸಿಯಾಟಲ್ ಪೊಲೀಸ್ ಇಲಾಖೆ ಹೇಳಿಕೆಯಲ್ಲಿ ತಿಳಿಸಿದ್ದು, ಸೋಮವಾರ ರಾತ್ರಿ ಪೊಲೀಸ್ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದ ಕಾರಣ ಯುವತಿ ಗಂಭೀರ ಸ್ಥಿತಿಯಲ್ಲಿ ಹಾರ್ಬರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದ್ರೆ ತೀವ್ರ ಗಾಯವೇ ಸಾವಿಗೆ ಕಾರಣ ವಾಗಿದೆ.

ಕಿಂಗ್ ಕೌಂಟಿ ಮೆಡಿಕಲ್ ಎಕ್ಸಾಮಿನರ್ ಕಚೇರಿಯು ಮಹಿಳೆಯನ್ನು ಜಾಹ್ನವಿ ಕಂದುಲಾ ಎಂದು ಗುರುತಿಸಿದೆ ಎಂದು ದಿ ಸಿಯಾಟಲ್ ಟೈಮ್ಸ್ ವರದಿ ಮಾಡಿದೆ.

ಜಾನ್ಹವಿ ಕಂದುಲಾ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯವರು. ಅವರು ಸೌತ್ ಲೇಕ್ ಯೂನಿಯನ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಯಾಗಿದ್ದರು, ಈ ಡಿಸೆಂಬರ್‌ನಲ್ಲಿ ಇನ್ಫಾರ್ಮೇಷನ್ ಸಿಸ್ಟಂನಲ್ಲಿ ಸ್ನಾತಕೋತ್ತರ ಪದವಿ ಪಡೆಯುವವರಿದ್ದರು.

ಸಿಯಾಟಲ್ ಅಗ್ನಿಶಾಮಕ ಇಲಾಖೆಯೊಂದಿಗೆ “ತುರ್ತು ಕರೆಗೆ ಓಗೊಟ್ಟು ಗಸ್ತು SUV ಅನ್ನು ಚಾಲನೆ ಮಾಡುವ ಅಧಿಕಾರಿಯು ಡೆಕ್ಸ್ಟರ್ ಅವೆನ್ಯೂ ನಾರ್ತ್‌ನಲ್ಲಿ ಉತ್ತರದ ಕಡೆಗೆ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಮಹಿಳಾ ಪಾದಚಾರಿ ಕ್ರಾಸ್‌ವಾಕ್‌ನಲ್ಲಿ ಪೂರ್ವದಿಂದ ಪಶ್ಚಿಮಕ್ಕೆ ದಾಟುತ್ತಿದ್ದಾಗ ವಾಹನವು ಅವರಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!