ವೈಯಕ್ತಿಕ ದ್ವೇಷಕ್ಕೆ ಬಲಿಯಾಯ್ತು ಅಮಾಯಕ ಜೀವ; ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ಯುವಕನ ಹ*ತ್ಯೆ

ಹೊಸದಿಗಂತ ವರದಿ ಕಲಬುರಗಿ: ನಗರದ ರಾಮನಗರದಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 26 ವರ್ಷದ ವಿಜಯಕುಮಾರ್ ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ನಿನ್ನೆ ಸಂಜೆ ನಗರದ ಶಾಮ್ ಬಾರ್‌ ಬಳಿ ಪರಿಚಿತ ವ್ಯಕ್ತಿಗಳೇ ವಿಜಯಕುಮಾರ್‌ಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಈ ಘಟನೆ ಕುರಿತು ಸ್ಟೇಷನ್‌ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.