ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊ. ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ನಾಳೆ (ಗುರುವಾರ) ರಚನೆಯಾಗಲಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜನರಲ್ ವಾಕರ್, ಮಧ್ಯಂತರ ಸರ್ಕಾರವು ಗುರುವಾರ ರಾತ್ರಿ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು.
ಸಲಹಾ ಮಂಡಳಿಯು 15 ಸದಸ್ಯರನ್ನು ಹೊಂದಿರಲಿದೆ ಎಂದು ಅವರು ಹೇಳಿದರು.
84 ವರ್ಷದ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನಸ್ ಅವರನ್ನು ಮಂಗಳವಾರ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಕ ಮಾಡಿದ್ದರು. ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ನೀಡಿ ದೇಶವನ್ನು ತೊರೆದಿದ್ದರು. ಅದಾದ ಮರುದಿನವೇ ಈ ಬೆಳವಣಿಗೆ ನಡೆದಿದೆ.