ರಕ್ಷಣೆಗಾಗಿ ನಿಂತಿದ್ದವರ ಮೇಲೆ ಏಕಾಏಕಿ ಬಿದ್ದ ಕಬ್ಬಿಣದ ಹೋರ್ಡಿಂಗ್, ಸ್ಥಳದಲ್ಲೇ ಐವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿರುಗಾಳಿಯ ಹೊಡೆತದಿಂದ ತಪ್ಪಿಸಿಕೊಳ್ಳಲು ಕಬ್ಬಿಣದ ಹೋರ್ಡಿಂಗ್ ಅಡಿ ನಿಂತಿದ್ದವರಿಗೆ, ಕಬ್ಬಿಣದ ಹೋರ್ಡಿಂಗ್ ಮೃತ್ಯುವಾಗಿ ಎರಗಿದೆ.

ಮಹರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್ ಸರ್ವೀಸ್ ರಸ್ತೆಯಲ್ಲಿ ಕಬ್ಬಿಣದ ಹೋರ್ಡಿಂಗ್ ಬಿದ್ದಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂಬೈ-ಪುಣೆ ಹೆದ್ದಾರಿಯ ರಾವೆಲ್ ಕಿವಾಲೆ ಪ್ರದೇಶದ ಸರ್ವೀಸ್ ರಸ್ತೆಯಲ್ಲಿ ಅವಘಡ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಏಕಾಏಕಿ ಬಿರುಗಾಳಿಗೆ ಹೆದರಿದ ಜನ ಕಬ್ಬಿಣದ ಹೋರ್ಡಿಂಗ್ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಬೃಹತ್ ಹೋರ್ಡಿಂಗ್ ಜನರ ಮೇಲೆ ಬಿದ್ದಿದ್ದು, ಐವರು ಮೃತಪಟ್ಟಿದ್ದಾರೆ. ಹೋರ್ಡಿಂಗ್ ಅಡಿಯಲ್ಲಿ ಇನ್ನೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ನೋಡಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!