ಹೊಸದಿಗಂತ ವರದಿ ಕಲಬುರಗಿ:
ಕಾಮುಕ ವೃದ್ಧನೊಬ್ಬ ಮನೆಗೆ ನುಗ್ಗಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ನರೋಣ ಪೋಲಿಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
65 ವರ್ಷದ ಕಾಮುಕ ವೃದ್ಧ ಗೋರಖನಾಥ್ ಚೌಹಾಣ್ ಎಂಬಾತ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದು,ಇದೀಗ ಕಾಯುಕ ವೃದ್ಧನನ್ನು ನರೋಣ ಪೋಲಿಸರು ಬಂಧಿಸಿದ್ದಾರೆ.
ಇನ್ನೂ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಈ ಕುರಿತು ನರೋಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.