ಹೊಸದಿಗಂತ ವರದಿ ಕಲಬುರಗಿ:
ರಸ್ತೆ ದಾಟುತ್ತಿದ್ದ ವೃದ್ಧನಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ, ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಂಪಳ್ಳಿ ಗ್ರಾಮದ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಚಿಂಚೋಳಿ ತಾಲೂಕಿನ ಯಂಪಳ್ಳಿ ಗ್ರಾಮದ ಬಕ್ಕಯ್ಯಾ ಮೃತಪಟ್ಟ ದುರ್ದೈವಿ, ಈತನಿಗೆ 68ವರ್ಷ ವಯಸ್ಸಾಗಿತ್ತು. ಬಹಿರ್ದೆಸೆಗೆ ಹೋಗಬೇಕೆಂದು ರಸ್ತೆ ದಾಟುವಾಗ ಈ ಅವಘಡ ಸಂಭವಿಸಿದೆ.
ಘಟನೆ ಸಂಬಂಧ ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.