ಕ್ಷುಲ್ಲಕ ಕಾರಣಕ್ಕೆ ವೃದ್ಧನನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಒಡಿಶಾದ ಕೋರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡುಹಲೇ ವೃದ್ಧನೊಬ್ಬನನ್ನು ಕುಟುಂಬಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿ ಕೊಂದಿದ್ದಾರೆ.

ಮೃತನನ್ನು ಕುರ್ಷಾ ಮಣಿಯಾಕ ಎಂದು ಗುರುತಿಸಲಾಗಿದ್ದು, ವೈಯಕ್ತಿಕ ವಿವಾದದ ಹಿನ್ನೆಲೆಯಲ್ಲಿ ತನ್ನ ಮಗನ ಮನೆಯ ಛಾವಣಿಯ ಹಾಳೆಗಳನ್ನು ಒಡೆದಿದ್ದಕ್ಕಾಗಿ ವೃದ್ಧನ ಮೇಲೆ ಕುಟುಂಬಸ್ಥರು ಕೋಪಗೊಂಡಿದ್ದಾರೆ. ಇಬ್ಬರ ನಡುವೆ ತೀವ್ರ ವಾಗ್ವಾದ ಸಂಭವಿಸಿದ್ದು ಈ ವೇಳೆ ಮಣಿಯಕನ ಸಹೋದರ, ಮಗ ಮತ್ತು ಸೊಸೆ ಅವರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮರದ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೃದ್ದ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಸ್ಥಳೀಯರ ನೆರವಿನಿಂದ ಆರೋಪಿ ಶವವನ್ನು ಸುಟ್ಟು ಹಾಕಿದ್ದಾನೆ.

ಘಟನೆ ಕುರಿತು ಕೆಲ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ತಂಡ ಆಗಮಿಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದೆ ಮತ್ತು ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!