ಸತತ ಮೂರನೇ ದಿನವೂ ನಿಲ್ಲದ ಕೋವಿಡ್ ಸೋಂಕಿನ ನಾಗಾಲೋಟ

ದಿಗಂತ ವರದಿ ಕೊಡಗು:

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಕೊರೋನಾ ಸೋಂಕಿನ ನಾಗಾಲೋಟ ಮುಂದುವರಿದಿದೆ. ಶುಕ್ರವಾರ ಪೂರ್ವಾಹ್ನ 11ಗಂಟೆಗೆ ಕೊನೆಗೊಂಡಂತೆ ಕಳೆದ 24ಗಂಟೆಗಳಲ್ಲಿ 327 ಹೊಸ ಪ್ರಕರಣಗಳು ವರದಿಯಾಗಿವೆ. ಮಡಿಕೇರಿ ತಾಲೂಕಿನಲ್ಲಿ 146, ಸೋಮವಾರಪೇಟೆ ತಾಲೂಕಿನಲ್ಲಿ 71 ಹಾಗೂ ವೀರಾಜಪೇಟೆ ‌ತಾಲೂಕಿನಲ್ಲಿ 110 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದು ಮತ್ತು ವಿಶೇಷವಾಗಿ ಶಾಲಾ ಕಾಲೇಜುಗಳಲ್ಲಿ‌ ಸೋಂಕಿನ ಪ್ರಮಾಣ ಹೆಚ್ಚುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 38,005ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 221 ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 35,969ಮಂದಿ ಸೋಂಕು ಮುಕ್ತರಾದಂತಾಗಿದೆ.

ಇದುವರೆಗೆ 438 ಮಂದಿ ಸೋಂಕಿಗೆ ಬಲಿಯಾಗಿದ್ದು, ಪ್ರಸಕ್ತ ಜಿಲ್ಲೆಯಲ್ಲಿ 1598 ಸಕ್ರಿಯ ಪ್ರಕರಣಗಳು, 203 ಕಂಟೈನ್ ಮೆಂಟ್ ವಲಯಗಳು ಹಾಗೂ ಪಾಸಿಟಿವಿಟಿ ದರ ಶೇ.10.01ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!