ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಲಿಸುತ್ತಿರುವ ರೈಲು ಹತ್ತಬಾರದು, ಇಳಿಯಬಾರದು ಎಂದು ರೈಲ್ವೆ ಇಲಾಖೆ ಎಷ್ಟೇ ಜಾಗೃತಿ ಮೂಡಿಸುತ್ತಿದ್ದರೂ ಕೆಲವರು ಯಾವುದಕ್ಕೂ ಕಿವಿಗೊಡದೆ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ದಾದರ್ ರೈಲು ನಿಲ್ದಾಣದಲ್ಲಿ ಒಬ್ಬ ಮಹಿಳೆ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಅಪಾಯಕ್ಕೆ ಸಿಲುಕಿದ ಘಟನೆ ನಡೆದಿದೆ.
ರೈಲ್ವೆ ರಕ್ಷಣಾ ಪಡೆ ಕಾನ್‌ಸ್ಟೆಬಲ್ ಮತ್ತು ಪ್ರಯಾಣಿಕರೊಬ್ಬರು ತಕ್ಷಣ ಪ್ರತಿಕ್ರಿಯಿಸಿ ಆಕೆಯನ್ನು ರಕ್ಷಿಸಿದ್ದಾರೆ. ಈ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಈ ಹಿಂದೆಯೂ ರೈಲು ನಿಲ್ದಾಣಗಳಲ್ಲಿ ಇಂತಹ ಹಲವು ಘಟನೆಗಳು ನಡೆದಿವೆ.
ಪ್ರಯಾಣಿಕರ ಅಜಾಗರೂಕತೆಯಿಂದ ಅಪಘಾತಕ್ಕೆ ಕಾರಣವಾಗುತ್ತಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ರೈಲು ನಿಲ್ದಾಣಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.
#WATCH | Maharashtra: An RPF (Railway Protection Force) jawan, and a passenger, save a woman's life after she fell on the platform while trying to board a moving train at Dadar Railway Station in Mumbai.
(Video: CCTV footage) pic.twitter.com/W473de67U1
— ANI (@ANI) January 14, 2023