VIRAL VIDEO| ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ: ಸ್ಟೇರಿಂಗ್ ಮೇಲೆಯೇ ಕೊನೆಯುಸಿರೆಳೆದ ಚಾಲಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆರ್‌ಟಿಸಿ ಚಾಲಕ ಬಸ್ ಚಾಲನೆ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿ ಸ್ಟೇರಿಂಗ್‌ ಮೇಲೆಯೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಬಸ್ ನಿಯಂತ್ರಣ ತಪ್ಪಿ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಪೊಲೀಸರ ಪ್ರಕಾರ, ಹರ್ ದೇವ್ ಪಟೇಲ್ ಎಂಬ ವ್ಯಕ್ತಿ ಜಬಲ್‌ಪುರದಲ್ಲಿ ಆರ್‌ಟಿಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಪ್ರತಿ ದಿನದಂತೆ ಶುಕ್ರವಾರವೂ ಕರ್ತವ್ಯಕ್ಕೆ ಹಾಜರಾಗಿದ್ದರು.

ಈ ಹಿನ್ನಲೆಯಲ್ಲಿ ಬಸ್ ಚಲಾಯಿಸುತ್ತಿದ್ದಾಗ ಏಕಾಏಕಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಟೇರಿಂಗ್ ಮೇಲೆಯೇ ಸಾವನ್ನಪ್ಪಿದ್ದಾರೆ. ಬಸ್ ನಿಯಂತ್ರಣ ತಪ್ಪಿ ಟ್ರಾಫಿಕ್ ಸಿಗ್ನಲ್ ನಲ್ಲಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮುಂದೆ ಸಾಗುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಮಧ್ಯದಲ್ಲಿ ನಿಂತಿತು.

ಸ್ವಲ್ಪ ದೂರದವರೆಗೆ ಆಟೋ ಮತ್ತು ಬೈಕ್‌ಗಳನ್ನು ಎಳೆದೊಯ್ದಿದೆ. ಈ ಅಪಘಾತದಲ್ಲಿ ವೃದ್ಧ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಅದು ಲೋ ಫ್ಲೋರ್‌ ಬಸ್‌ ಆಗಿದ್ದರಿಂದ ಯಾರೂ ಬಸ್‌ ಕೆಳಗೆ ಬಿದ್ದಿಲ್ಲ ಎಂದು ಪೊಲೀಸರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!