ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಪರಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅನಾರೋಗ್ಯದ ಕಾರಣದಿಂದ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಚಂದ್ರಶೇಖರ್ ಅಲಿಯಾಸ್ ಚಂದ್ರು (32) ಪರಾರಿಯಾದ ಕೈದಿ.

ಘಟನೆ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಜೈಲರ್ ಡಿ.ಗೋಪಿನಾಥ್ ಅವರು ನೀಡಿದ ದೂರಿನ ಮೇರೆಗೆ ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2023ರಲ್ಲಿ ಸುಬ್ರಹ್ಮಣ್ಯನಗರ ಠಾಣೆಯಲ್ಲಿ ದಾಖಲಾಗಿದ್ದ ಡಕಾಯಿತಿ ಪ್ರಕರಣದಲ್ಲಿ ಚಂದ್ರಶೇಖರ್‌ನನ್ನು ಬಂಧಿಸಲಾಗಿತ್ತು. ಎರಡು ವರ್ಷಗಳಿಂದ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಚಂದ್ರಶೇಖರ್‌ಗೆ ಮೇ 2ರಂದು ಎದೆನೋವು ಹಾಗೂ ವಾಂತಿ ಹೆಚ್ಚಾಗಿದ್ದರಿಂದ ಜೈಲಿನ ಆಸ್ಪತ್ರೆೆಯಲ್ಲಿ ಚಿಕಿತ್ಸೆೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆೆಗಾಗಿ ವಿಕ್ಟೋರಿಯಾ ಆಸ್ಪತ್ರೆೆಗೆ ದಾಖಲಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!