ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪರಿಚಿತ ವ್ಯಕ್ತಿಯೊಬ್ಬ ಬೆಂಗಳೂರಿನ ನಾಯಂಡಹಳ್ಳಿ ಮೇಲ್ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಫ್ಲೈ ಓವರ್ ನಲ್ಲಿ ಬೈಕ್ ನಿಲ್ಲಿಸಿದ್ದ ಸವಾರನೊಬ್ಬ ಫ್ಲೈ ಓವರ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚುತ್ತಿವೆ. ಎಲ್ಲದಕ್ಕೂ ಸಾವು ಪರಿಹಾರವಲ್ಲ. ತಾಳ್ಮೆಯಿಂದ ಕುಳಿತು 10 ನಿಮಿಷ ಯೋಚಿಸಿದರೆ ಎಲ್ಲದಕ್ಕೂ ಪರಿಹಾರ ಸಿಗುತ್ತದೆ.