ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಪರಿಚಿತ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದುರದೃಷ್ಟವಶಾತ್ ಇಮ್ರಾನ್ (23) ಮತ್ತು ಕಲಾಂ ಸಾಬ್ (19) ಮೃತಪಟ್ಟಿದ್ದಾರೆ. ಗಾಯಗೊಂಡ ಶೇಖ್ ಜೊಸಿಂಗೆ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂವರು ಯುವಕರು ತೆಕ್ಕಲಕೋಟೆಯಿಂದ ಸಿರಗುಪ್ಪ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದರು ಎನ್ನಲಾಗಿದೆ. ಮಾರ್ಗಮಧ್ಯೆ ಅಪರಿಚಿತ ವಾಹನವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.