ಬಿಜೆಪಿ ಕಾರ್ಯಕ್ರಮಕ್ಕೆ ಅನಂತ್​ ನಾಗ್ ಗೈರು: ನಿರೀಕ್ಷೆ ಸುಳ್ಳಾಗಿಸಿದರೇ ನಟ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕನ್ನಡ ಸಿನಿಮಾರಂಗದ ಹಿರಿಯ ನಟ ಅನಂತ್​ ನಾಗ್ ಇಂದು ಸಂಜೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ರಾಜ್ಯದಾದ್ಯಂತ ಹರಿದಾಡುತ್ತಿತ್ತು. ಆದ್ರೆ ಇದೀಗ ಅನಂತ್ ನಾಗ್ ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ ಆಗಬೇಕಿತ್ತಾದರೂ ಕಡೇ ಕ್ಷಣದಲ್ಲಿ ಗೈರಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಮುನಿರತ್ನ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗುತ್ತಾರೆ ಎಂದು ವರದಿಯಾಗಿತ್ತು. ಹೀಗಾಗಿ ನಿಗದಿಯಾಗಿದ್ದ ಸಮಯದಂತೆ ಸಂಜೆ 4.30 ಕಳೆದರೂ ಅನಂತ್ ನಾಗ್ ಬಂದಿಲ್ಲ. ಆದ್ರೆ ಕಾಂಗ್ರೆಸ್ ಸೇವಾದಳದ ಕಾರ್ಯದರ್ಶಿ ರೇಣುಕಾ ಪ್ರಸಾದ್, ಕಾಂಗ್ರೆಸ್ ಕೆಪಿಸಿಸಿ ಕಾರ್ಯದರ್ಶಿ ತುಳಸಿರಾಮ್, ಸಪ್ತಗಿರಿ ಶಂಕರ್ ನಾಯ್ಕ್ ಹಾಗೂ ನೆಲಮಂಗಲ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಉಮೇಶ್ ಹಾಗೂ ಅನೇಕ ಬೆಂಬಲಿಗರು ಬಿಜೆಪಿ ಸೇರ್ಪಡೆಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!